– ಸುಳ್ಳಿಗೆ ಹೆಸರಾದ ಬಿಜೆಪಿಗೆ ಮತ ನೀಡಬೇಡಿ : ರಾಯರಡ್ಡಿ..!

 

 

– ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : ಬಿಜೆಪಿ ಮಹಾ ಸುಳ್ಳಿನ ಪಕ್ಷ ಇದಕ್ಕೆ ಚುನಾವಣೆ ಮನ್ನಣೆ ನೀಡಿದರೆ ದೇಶ ಮತ್ತು ರಾಜ್ಯಕ್ಕೆ ಭವಿಷ್ಯವಿಲ್ಲ ಎಂದು ಮಾಜಿ ಸಚಿವ
ಬಸವರಾಜ ರಾಯರೆಡ್ಡಿ ಹೇಳಿದರು..!

    ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್  ಸಮಿತಿ ಏರ್ಪಡಿಸಿದ್ದ ರಾಯಚೂರು-ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಜರಗುವ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಜಯಶಾಲಿಯಾಗಿ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷಗಳು ಕಳೆದಿವೆ. ರಾಜ್ಯದ ಒಂದು ಗ್ರಾಮ ಪಂಚಾಯಿತಿಗಳಿಗೆ ಒಂದು ಮನೆ ಕೊಡಲು ಆಗಿಲ್ಲ. ಬರೀ ಭ್ರಷ್ಟಾಚಾರ ನಡೆಸಿ ಜನರಿಗೆ ಮೋಸ ಮಾಡಿದ ಇಂಥ ಸರ್ಕಾರ ಏಕೆ ಬೇಕು? ಎಂದು ಪ್ರಶ್ನಿಸಿದ ರಾಯರೆಡ್ಡಿ, ಬಿಜೆಪಿ ಮಹಾ ಸುಳ್ಳಿನ ಪಕ್ಷ, ಇದಕ್ಕೆ ಚುನಾವಣೆ ಮನ್ನಣೆ ನೀಡಿದರೆ ದೇಶ ಮತ್ತು ರಾಜ್ಯಕ್ಕೆ ಭವಿಷ್ಯವಿಲ್ಲ ಎಂದು ಹೇಳಿದರು.

    ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ತಂದು ಅಧಿಕಾರ ನೀಡಿದ್ದು  ಕಾಂಗ್ರೆಸ್ ಪಕ್ಷವಾಗಿದೆ. ಈ ಹಿಂದೆ ಆಡಳಿತದಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಪರಿಶೀಲಿಸಿ ನಮ್ಮ ಪಕ್ಷದ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ರಾಯರೆಡ್ಡಿ ಮನವಿ ಮಾಡಿದರು.
ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ,
ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ರಾಯಚೂರು ಜಿಲ್ಲಾ ಅಧ್ಯಕ್ಷ ಬಿ.ವಿ.ನಾಯಕ, ಮಾಜಿ ಸಂಸದ ಶಿವರಾಮಗೌಡ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸವನಗೌಡ ತುರ್ವಿಹಾಳ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಮಾಜಿ ಶಾಸಕ ಹಸನಸಾಬ ದೋಟಿಹಾಳ, ದೇವೇಂದ್ರಪ್ಪ ಬಳೂಟಗಿ, ಮಹಿಳಾ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ ಮಾತನಾಡಿದರು. ಮುಖಂಡರಾದ ಫಕೀರಪ್ಪ ಚಳಗೇರಿ, ಶೇಖರಗೌಡ ಮಾಲಿಪಾಟೀಲ್, ಮಹಾಂತೇಶ ಅಗಸಿಮುಂದಿನ, ಲಾಡ್ಲೇಮಷಾಕ್, ವಸಂತ್ ಮೇಲಿನಮನಿ, ಸಂಗಯ್ಯ ವಸ್ತ್ರದ, ಶಿವಶಂಕರಗೌಡ ಪಾಟೀಲ್, ಬಸೆಟ್ಟಪ್ಪ ಕುಂಬಾಳವತಿ ಹಾಗೂ ಪುರಸಭೆ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು..!!