– ಡಿಸೆಂಬರ್ 19 ರಂದು ಶಾಡಲಗೇರಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ..!

ಕೃಷಿ ಪ್ರಿಯ ನ್ಯೂಸ್ |

– ಶರಣಪ್ಪ ಕುಂಬಾರ

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಡಲಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶರಣಬಸವೇಶ್ವರ ದೇವಸ್ಥಾನ ಉದ್ಘಾಟನೆ ನಿಮಿತ್ಯ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಡಿ.19 ರಂದು ಹಮ್ಮಿಕೊಳ್ಳಲಾಗಿದೆ..!
   ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರು ದೇವಸ್ಥಾನ ಉದ್ಘಾಟಿಸಲಿದ್ದಾರೆ. ಸಂಸದ ಸಂಗಣ್ಣ ಕರಡಿ, ತುಗ್ಗಲದೋಣಿ ಗ್ರಾಮ ಪಂಚಾಯತಿ ಅಧ್ಯಕ್ಷ ಶಿವರಾಜ ಎಸ್ ಬೆಣ್ಣಿ ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾಮೂಹಿಕ ವಿವಾಹದಲ್ಲಿ ಹೆಸರು ನೊಂದಾಯಿಸಲು ರಾಯಪ್ಪ ಆರಿ 7259667561, ಗುರುಪಾದಪ್ಪ ಹಡಪದ 8970062291 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ..!!