ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಷಣೆಯಾದ ಹಿನ್ನೆಲೆ ಡಿ.5 ರಂದು ಪಟ್ಟಣ ವ್ಯಾಪ್ತಿಯ ಜೆಡಿಎಸ್ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ..!
ತಾವರಗೇರಾ ಪಟ್ಟಣದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ 05-12-2021 ರಂದು ಸಂಜೆ 4 ಗಂಟೆಗೆ ಸಭೆ ಜರುಗಲಿದ್ದು, ಪಟ್ಟಣ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ಆಯ್ಕೆ ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ನವಲಹಳ್ಳಿ, ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಎಂ.ಹಿರೇಮಠ, ತಾಲೂಕಾಧ್ಯಕ್ಷ ಬಸವರಾಜ ನಾಯಕ, ಚಂದ್ರು ನಾಲತವಾಡ, ಮಹಿಳಾ ಜಿಲ್ಲಾಧ್ಯಕ್ಷೆ ಸುವರ್ಣಮ್ಮ ಕುಂಬಾರ ಭಾಗವಹಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಚಂದ್ರು ಗುರಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!!