ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಅಖಿಲ ಕರ್ನಾಟಕ ದಾಳಿಂಬೆ ಬೆಳೆಗಾರರ ಹೋರಾಟ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ 13/12/2021ರಿಂದ ಅಹೋರಾತ್ರಿ ಧರಣಿ ಹಮ್ಮಿಕೊಂಡಿದೆ..!
ದಾಳಿಂಬೆ ಬೆಳೆಗಾರರ ಸಾಲ ಸಂಪೂರ್ಣ ಮನ್ನಾ ಆಗಬೇಕು. ಇಲ್ಲವೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾದರಿಯಲ್ಲಿ ಮೂಲ ಸಾಲಕ್ಕೆ 10% OTS ಋಣಮುಕ್ತ ಸಂಧಾನ ಯೋಜನೆ ಹಾಗೆಯೇ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಗ್ರಾಮೀಣ ಬ್ಯಾಂಕುಗಳು ಜಾರಿಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳುವುದಾಗಿ ರಾಜ್ಯ ದಾಳಿಂಬೆ ಬೆಳೆಗಾರರ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಅಬ್ದುಲ್ ನಹೀಮ್ ಪತ್ರಿಕೆಗೆ ತಿಳಿಸಿದ್ದಾರೆ. ಅಯ್ಯಪ್ಪ ಯಡ್ಡೋನಿ, ಆನಂದ ಈಳಗೇರ ಸೇರಿದಂತೆ ಇನ್ನಿತರ ದಾಳಿಂಬೆ ಬೆಳೆಗಾರರಿದ್ದರು..!!