ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ವಿಕಾಸ ಅಕಾಡೆಮಿ ಕಲಬುರ್ಗಿ ವತಿಯಿಂದ 30-12-2021ರಂದು ಸಾವಯವ ಸಮಗ್ರ ಕೃಷಿ – ಸಂತೃಪ್ತ ರೈತ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ..!
ಕಾರ್ಯಕ್ರಮದ ಸ್ಥಳ : ಜಿಲ್ಲೆಯ ಕುಷ್ಟಗಿಯಿಂದ ಗಜೇಂದ್ರಗಡ ತೆರಳುವ ಮುಖ್ಯ ರಸ್ತೆ ಬಳಿಯ ವಜ್ರಬಂಡಿ ಕ್ರಾಸ್ ನಿಂದ ಒಂದು ಕಿ.ಮೀ ದೂರದ ರೈತ ದೇವೇಂದ್ರಪ್ಪ ಬಳೂಟಗಿ ಅವರ ತೋಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕಲಬುರ್ಗಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ ಅಧ್ಯಕ್ಷತೆ ವಹಿಸುವರು. ಗಣಿ ಸಚಿವ ಹಾಲಪ್ಪ ಆಚಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಸಂಗಣ್ಣ ಕರಡಿ, ಶಾಸಕ ಅಮರೇಗೌಡ ಬಯ್ಯಾಪೂರ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಪ್ರಗತಿಪರ ರೈತರು ಭಾಗವಹಿಸಲಿದ್ದಾರೆ..!!