ಬೂಸ್ಟರ್ ಲಸಿಕೆ ಕಾರ್ಯಕ್ರಮಕ್ಕೆ ಬಯ್ಯಾಪೂರ ಚಾಲನೆ

 


 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : ಮಹಾ ಮಾರಿ ಕೊರೋನಾ 3ನೇ ಅಲೆ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಡಿ ದೇಶದಾದ್ಯಂತ 60ವರ್ಷ ಮೇಲ್ಪಟ್ಟವರು ಹಾಗೂ ಎರಡೂ ಲಸಿಕೆ ಪಡೆದ ಸಣ್ಣಪುಟ್ಟ ಕಾಯಿಲೆಗೆ ಒಳಗಾದವರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 3ನೇ ಲಸಿಕೆ ಬೂಸ್ಟರ್ ಡೋಸ್ ಹಾಕಲು ಆರಂಭಿಸಿದ್ದು, ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಹೇಳಿದರು..!

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 10-01-2022 ರಂದು ಹೆಲ್ತ್ ಕೇರ್ ವರ್ಕರ ಮತ್ತು ಫ್ರಂಟ್‌ ಲೈನ್ ವರ್ಕರ್ ಹಾಗೂ 60 ವರ್ಷ ಮೇಲ್ಪಟ್ಟವರು ಹಾಗೂ ಸಹ ವ್ಯಾದಿ ಫಲಾನುಭವಿಗಳಿಗೆ ಕೋವಿಡ್ ಲಸಿಕೆಯ ಮೂರನೇ ಡೋಸ ಹಾಕುವ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದೇಶದ ಮೇರೆಗೆ ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರುಗಳಿಂದ ತಮ್ಮ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಿಲ್ಲಾ ಹಾಗೂ ತಾಲೂಕಾ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯ ಮೂರನೇ ಲಸಿಕೆ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಕ್ಕೆ ಏಕಕಾಲಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜನರ ಆರೋಗ್ಯ ಕಾಪಾಡಲು ಸರ್ಕಾರ ಕೋವಿಡ್ ಲಸಿಕೆ ನೀಡುತ್ತಿದೆ. ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ, ಜನ ಮಾತ್ರ ಜಾಗೃತರಾಗುತ್ತಿಲ್ಲ. ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆಯದೇ ಇರುವವರು ಇನ್ನೂ ಇದ್ದಾರೆ. ಅಂಥವರಿಂದ ತೊಂದರೆ ಉಂಟಾಗುತ್ತದೆ ಜತೆಗೆ ಕೋವಿಡ್ ಬಾದೆಗೆ ಒಳಗಾಗಬೇಕಾಗುತ್ತದೆ. ಹಾಗಾಗಿ ಅಂಥವರು ದಯವಿಟ್ಟು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಲೂಕು ವೈದ್ಯಾಧಿಕಾರಿ ಡಾ.ಆನಂದ ಗೋಟೂರು ಅವರು ಮೊದಲು ಕೋವಿಡ್ 3ನೇ ಲಸಿಕೆ ಬೂಸ್ಟರ್ ಡೋಸ್ ಪಡೆದುಕೊಂಡರು. ಬಳಿಕ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆ ಆಡಳಿತಾಧಿಕಾರಿ ತಜ್ಞ ವೈದ್ಯ ಶ್ರೀಕಾಂತ್ ಕೆ.ರೆಡ್ಡಿ, ಆಸ್ಪತ್ರೆ ಉಪ ಆಡಳಿತಾಧಿಕಾರಿ ಉಸ್ಮಾನ, ಡಾ.ಚಂದ್ರಕಾಂತ ಮಂತ್ರಿ, ಲ್ಯಾಬ್ ಟೆಕ್ನಿಶಿಯನ್ ಬಾಲಾಜಿ ಬಳಿಗಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಜು ವಾಲಿಕಾರ ಹಾಗೂ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು..!!