ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಪಕ್ಕದ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಅರಣ್ಯ ಪ್ರದೇಶಕ್ಕೆ ಹತ್ತಿಕೊಂಡಿರುವ ಜಮೀನೊಂದರಲ್ಲಿ ಕಟ್ಟಿ ಹಾಕಲಾಗಿದ್ದ ಹಸುವೊಂದು ಚಿರತೆ ದಾಳಿಗೆ ಬಲಿಯಾಗಿದೆ..!
ನಾಗೇಂದ್ರಗಡ ಗ್ರಾಮದ ನಿಂಗಪ್ಪ ಎಂಬ ರೈತನಿಗೆ ಹಸು ಸೇರಿದ್ದಾಗಿದೆ. 15-01-2022 ರಂದು ರಾತ್ರಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಜಮೀನನಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಏಕಾಏಕಿ ದಾಳಿ ನಡೆಸಿದ ಚಿರತೆ ಹಸುವನ್ನು ತಿಂದು ಹಾಕಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಹುತೇಕ ಗಡಿ ಗ್ರಾಮಗಳು ಸೇರಿದಂತೆ ಗಜೇಂದ್ರಗಡ ತಾಲೂಕಿನ ಗ್ರಾಮಗಳಲ್ಲಿ ಹಲವು ಬಾರಿ ಚಿರತೆ ದಾಳಿ ಮಾಡುತ್ತಿರುವುದು ಕಂಡುಬಂದಿರುತ್ತದೆ. ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ರೈತರು ಸಾಕಷ್ಟು ಒತ್ತಾಯಿಸಿದ್ದಾರೆ. ಆದರೆ, ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮಾತ್ರ ವಿಫಲವಾಗಿದೆ ಎಂಬುದು ರೈತರ ಆಕ್ರೋಶವಾಗಿದೆ..!!