ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕೊಪ್ಪಳ ಜಿಲ್ಲಾ ಉಸ್ತುವಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಬದಲಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ..!
ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನು ಸಚಿವ ಆನಂದಸಿಂಗ್ ಅವರಿಗೆ ವಹಿಸಲಾಗಿದೆ. ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹೊತ್ತಿದ್ದ ಸಚಿವ ಹಾಲಪ್ಪ ಆಚಾರ್ ಅವರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿರುವುದು ವಿಶೇಷ.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಸಾರಿಗೆ ಸಚಿವ ಶ್ರೀರಾಮಲು ಅವರಿಗೆ ಅವರ ಆಸೆಯಂತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಜಾಣತನ ಮೆರೆದಿದ್ದಾರೆ ಎಂಬ ಮಾತುಗಳು ಕೂಡಾ ಕೇಳಿ ಬರುತ್ತವೆ..!!