ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲಾ ಪಂಚಾಯಿತಿ ಸಿಇಓ ಬಿ.ಫೌಜಿಯಾ ತರುನ್ನಮ್ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಒಲಿದು ಬಂದಿದೆ..!
ರಾಜ್ಯ ಚುನಾವಣಾ ಆಯೋಗವು ಸ್ವೀಪ್ ಕಾರ್ಯಕ್ರಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿಗಳಿಗೆ ಕೊಡಮಾಡುವ 2021-22 ನೇ ಸಾಲಿನ ಪ್ರಶಸ್ತಿಗೆ ಕೊಪ್ಪಳ ಸಿಇಓ ತರುನ್ನಮ್ ಆಯ್ಕೆಯಾಗಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೂ ಜರುಗಿದ ಚುನಾವಣೆಯ ಎಲ್ಲಾ ಕಾರ್ಯಗಳಲ್ಲಿ ಸಿಇಓ ಅವರು ವಿಶಿಷ್ಟವಾದ ಸೇವೆಯನ್ನು ಆಯೋಗ ಪರಿಗಣಿಸಿದೆ. ಜಿಲ್ಲೆಯಲ್ಲಿ ಜಿಪಂ ಸಿಇಓ ಆಗಿ ಅಧಿಕಾರವಹಿಸಿಕೊಂಡಾಗಿನಿಂದ ಜಿಲ್ಲೆಯಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದಲ್ಲದೆ, ಸಚ್ಛಭಾರತ ಯೋಜನೆ ಸೇರಿದಂತೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೈಗೊಂಡಿರುವ ಕ್ರಮ ಮಾತ್ರ ಮೆಚ್ಚುವಂತದ್ದು. ಇವರ ಸೇವೆ ಜಿಲ್ಲೆಯಲ್ಲಿ ಮುಂದುವರೆಯಲಿ ಎಂಬುದು ನಮ್ಮ ಆಶಯ..!!