ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

 

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ..!

ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಯಡಿಯೂರಪ್ಪ ಅವರ ಹಿರಿಯ ಮಗಳಾದ ಪದ್ಮಾವತಿದೇವಿಯವರ ಮಗಳ ಸೌಂದರ್ಯ ಎಂಬುದು ಸ್ಪಷ್ಟವಾಗಿದೆ. ಕಳೆದ ವರ್ಷ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆಯಾಗಿತ್ತು. ಕುಟುಂಬದಲ್ಲಿನ ಮನಸ್ತಾಪ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತದೇಹ ನೋಡಲು ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರಕಾರದ ಸಚಿವರ ದಂಡು ಬೌರಿಂಗ್ ಆಸ್ಪತ್ರೆಯತ್ತ ಹರಿದು ಬರುತ್ತಿದೆ..!!