ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಎಲ್ಲಾ ಸರಕಾರಿ ಪ್ರೌಢ ಶಾಲಾ ಕನ್ನಡ ಮಾಧ್ಯಮದ 10 ನೇ ತರಗತಿಯ 12 ಸಾವಿರ ವಿದ್ಯಾರ್ಥಿಗಳಿಗೆ ‘ಚಿಗುರು’ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗಿತು..!
ಕೊಪ್ಪಳ ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಜ್ಞಾನ ಜ್ಯೋತಿ ಕಾರ್ಯಕ್ರಮದಡಿ ಎಲ್ಲಾ ಸರಕಾರಿ ಪ್ರೌಢ ಶಾಲಾ 10 ನೇ ತರಗತಿಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆ ಹಾಗೂ ಕಲಿಕಾ ಗುಣಮಟ್ಟ ಹೆಚ್ಚಳದ ಹಿನ್ನೆಲೆಯಲ್ಲಿ ಚಿಗುರು ಅಭ್ಯಾಸ ಪುಸ್ತಕ ಹೊರ ಬಂದಿದೆ. ಅತ್ಯಂತ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರುವಲ್ಲಿ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹಾಗೂ ಜಿಪಂ ಸಿಇಓ ಬಿ.ಫೌಜಿಯಾ ತರುನ್ನುಮ್ ಆಸಕ್ತಿ ವಹಿಸಿರುವುದು ವಿಶೇಷ. ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಅಭ್ಯಾಸ ಪುಸ್ತಕಗಳು ಈ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕಲಿಕಾ ಮಟ್ಟದಿಂದ ಭವಿಷ್ಯಕ್ಕೆ ದಾರಿ ದೀಪವಾಗಲಿ ಎಂಬುದು ನಮ್ಮ ಆಶಯ.