ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಜಿಲ್ಲೆಯ ಕುಷ್ಟಗಿ ಪಟ್ಟಣದ ನಿವಾಸಿ ಹಿರೇವಂಕಲಕುಂಟಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶರಣಬಸವೇಶ್ವರ ವಿ.ಡಾಣಿ ಅವರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕಮಾಡಲಾಗಿದೆ..!
ಈ ಕುರಿತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ನಿಯಮ 30 (1) (vi) ಅಡಿಯಲ್ಲಿ ಪ್ರಾಂಶುಪಾಲರ ಕೋಟಾದಡಿಯಲ್ಲಿ ವಿಶ್ವವಿದ್ಯಾಲಯ ವಿದ್ಯಾವಿಷಯಕ ಪರಿಷತ್‌ಗೆ ಅನ್ವಯಿಸಿ 02 ವರ್ಷಗಳ ಅವಧಿಗೆ ಡಾ.ಶರಣಬಸವೇಶ್ವರ ವಿ.ಡಾಣಿ ಅವರನ್ನು ವಿದ್ಯಾವಿಷಯಕ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಕುಲಪತಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಈ ಭಾಗದ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಸಾಹಿತಿಗಳು, ಅಪಾರ ಶಿಷ್ಯ ಬಳಗ ಅಭಿನಂದಿಸಿದೆ..!!