ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ನೂತನ ಎಸಿಯಾಗಿ ಹೇಮಂತ ಎನ್ ( Probtionary IAS) ಅವರು ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ನಾರಾಯಣರೆಡ್ಡಿ ಕನಕರೆಡ್ಡಿ ಅವರಿಂದ ಅಧಿಕಾರ ಸ್ವೀಕರಿಸಿದರು..!
ಕಚೇರಿಯಲ್ಲಿಯೇ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದ ನಾರಾಯಣರೆಡ್ಡಿ ಕನಕರೆಡ್ಡಿ ಅವರು ಇಲ್ಲಿನ ಸೇವೆಯನ್ನು ಸ್ಮರಿಸಿಕೊಂಡರು. ಕೊಪ್ಪಳದಲ್ಲಿ ಸಲ್ಲಿಸಿದ ಸೇವೆಯನ್ನು ಎಂದಿಗೂ ಮರೆಯುವುದಿಲ್ಲವೆಂದು ಅಭಿಪ್ರಾಯವ್ಯಕ್ತಪಡಿಸಿದರು. ಎಸಿ ಕಚೇರಿ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ ವರ್ಗ ನಿರ್ಗಮಿತ ಎಸಿಯವರ ಬಿಳ್ಕೋಡುಗೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಅಲ್ಲದೆ, ನೂತನವಾಗಿ ಅಧಿಕಾರ ಸ್ವೀಕರಿಸಿದ ಉಪವಿಭಾಗಾಧಿಕಾರಿ ಹೇಮಂತ ಎನ್ ಅವರನ್ನ ಆತ್ಮೀಯವಾಗಿ ಬರಮಾಡಿಕೊಂಡರು..!!