ಶಿಕ್ಷಕರ ಪತ್ತಿನ ಸಹಕಾರ ಸಂಘದ ಅವ್ಯವಹಾರ : ಕ್ರಿಮಿನಲ್ ಪ್ರಕರಣ ದಾಖಲೆಗೆ ಸಭೆ ನಿರ್ಧಾರ

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದಲ್ಲಿ 82,09,886=00 ರೂಪಾಯಿಗಳ ಅವ್ಯವಹಾರದಲ್ಲಿ ಭಾಗಿಯಾದ ಕಾರ್ಯದರ್ಶಿ ಹಾಗೂ ಸಹ ಕಾರ್ಯದರ್ಶಿ ಇಬ್ಬರನ್ನು ಸೇವೆಯಿಂದ ವಜಾಗೊಳಿಸುವುದು ಅಲ್ಲದೇ, ಅವರ ಮೇಲೆ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಾಮಾನ್ಯ ಸಭೆಯಲ್ಲಿ ತಿರ್ಮಾನಿಸಲಾಗಿತು..!

ಸಂಘದಲ್ಲಿ ನಡೆದಿರುವ ಅವ್ಯವಹಾರದ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಲಕ್ಕಲಕಟ್ಟಿ ಅವರ ಅಧ್ಯಕ್ಷತೆಯಲ್ಲಿ 13-02-2022 (ನಿಯಮ 68 ಅಡಿ) ಸಾಮಾನ್ಯ ಸಭೆ ಕರೆಯಲಾಗಿತ್ತು. ಅವ್ಯವಹಾರದಲ್ಲಿ ಭಾಗಿಯಾದ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಇವರಿಂದ ಅವ್ಯವಹಾರವಾದ 82,09,886=00 ರೂಪಾಯಿಗಳಿಗೆ ಬಡ್ಡಿ ಸಮೇತ ವಸೂಲಿ ಕ್ರಮಕ್ಕೆ ಮುಂದಾಗಬೇಕೆಂದು ಸದಸ್ಯರು ಆಕ್ರೋಶವ್ಯಕ್ತಪಡಿಸಿದರು. ಸಭೆಗೆ ಕಾರ್ಯದರ್ಶಿ ಬಸವರಾಜ ಹೊರಪೇಟಿ ಗೈರು ಹಾಜರಿ ಆಗಿರುವುದಲ್ಲದೆ, ಸಂಘ ನೀಡಿದ ನೋಟಿಸ್ ಗೆ ಉತ್ತರ ನೀಡದಿರುವುದು ಸಭೆಯಲ್ಲಿದ್ದವರಿಗೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತು..!!