ಕುಂಬಳಾವತಿ ಜಾತ್ರೆ : ಪ್ರಾಣಿ ಬಲಿ ನಿಷೇಧ

 


 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : 22-02-2022 ರಿಂದ 25-02-2022ರ ವರೆಗೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕುಂಬಳಾವತಿ ಗ್ರಾಮದ ಗ್ರಾಮದೇವತೆ ಶ್ರೀ ದ್ಯಾಮಾಂಬಿಕಾದೇವಿ ಜಾತ್ರಾ ಮಹೋತ್ಸವ ಜರುಗಲಿದ್ದು, ಸಾರ್ವಜನಿಕ ಸ್ಥಳ, ದೇವಸ್ಥಾನ, ಪೂಜಾ ಸ್ಥಳ ಸೇರಿದಂತೆ ಇದರ ಸುತ್ತಮುತ್ತಲ ಸ್ಥಳಗಳಲ್ಲಿ ಪ್ರಾಣಿ ಬಲಿಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಕಾಯ್ದೆಯ ಉಲ್ಲಂಘಿಸುವವರಿಗೆ ಕಾನೂನು ಕ್ರಮ ವಿಧಿಸಲಾಗುವುದು ಎಂದು ಸಿಪಿಐ ನಿಂಗಪ್ಪ ಎನ್.ಆರ್. ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಿಷ್ಟು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ
ಜಾತ್ರೆಯಲ್ಲಿ ಭಕ್ತರು ಹರಕೆಯ ರೂಪದಲ್ಲಿ ಕುರಿ, ಮೇಕೆ, ಕೋಳಿ ಸೇರಿದಂತೆ ಇತರೆ ಪ್ರಾಣಿಗಳನ್ನು ಬಲಿ ನೀಡುವದು ಕಾನೂನು ಬಾಹಿರ ಮತ್ತು ಮೌಢ್ಯ ಆಚರಣೆಯಾಗಿರುತ್ತದೆ. 1959 ರ ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ಪ್ರಕಾರ ಸಾರ್ವಜನಿಕ ಸ್ಥಳ, ದೇವಸ್ಥಾನ, ಪೂಜಾ ಸ್ಥಳ ಸೇರಿದಂತೆ ಇದರ ಸುತ್ತಮುತ್ತಲ ಸ್ಥಳಗಳಲ್ಲಿ ಪ್ರಾಣಿ ಬಲಿ ಸಂಪೂರ್ಣ ನಿಷೇಧಿಸಲಾಗಿದೆ. ಈ ಮೂರು ದಿನಗಳಲ್ಲಿ ನಡೆಯುವ ಜಾತ್ರೆಯಲ್ಲಿ ಪೊಲೀಸ್ ಕಾವಲು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ತಹಸೀಲ್ದಾರ್ ಎಂ.ಸಿದ್ದೇಶ, ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ಶ್ರೀ ದಯಾನಂದ ಮಹಾಸ್ವಾಮೀಜಿ ಹಾಜರಿದ್ದರು.