ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ತೋಟಗಾರಿಕೆ ಫಸಲುಗಳಾದ ದ್ರಾಕ್ಷಿ , ದಾಳಿಂಬೆ, ಪೆರಲ, ಅಂಜೂರು, ಕಲ್ಲಂಗಡಿ, ಕರಬೂಜು, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಮಾರಾಟ ಹಾಗೂ ಪ್ರದರ್ಶನ ಮೇಳ – 2022 ಅನ್ನು ತೋಟಗಾರಿಕೆ ಇಲಾಖೆ ಆವರಣದಲ್ಲಿ 26-02-2022 ರಿಂದ 01-03-2022 ರವರೆಗೆ ಹಮ್ಮಿಕೊಳ್ಳಲಾಗಿದೆ..!
ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಮೇಳ ಉದ್ಘಾಟಿಸಲಿದ್ದಾರೆ. ಗಣಿ ಸಚಿವ ಹಾಲಪ್ಪ ಆಚಾರ ಘನ ಉಪಸ್ಥಿತಿಯಲ್ಲಿ ಜರಗುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಸೇರಿದಂತೆ ಪ್ರಗತಿಪರ ರೈತರು ಭಾಗವಹಿಸಲಿದ್ದಾರೆ. ರೈತರು ಸೇರಿದಂತೆ ಹಣ್ಣು ಪ್ರಿಯರು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣಾ ಉಕ್ಕುಂದು ತಿಳಿಸಿದ್ದಾರೆ..!!