ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಕವಿ ಅಮರೇಗೌಡ ಪಾಟೀಲ್ ಜಾಲಿಹಾಳ ಅವರ ಚೊಚ್ಚಲ ಕವನ ಸಂಕಲನ ‘ಚೆಲ್ವರಾಶಿ’ ದಿನಾಂಕ 06-03-2022 ರಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಲೋಕಾರ್ಪಣೆಗೊಳ್ಳಲಿದೆ..!
ಇಳಕಲ್ ನ ಗುರುಮಹಾಂತ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆ ವಿಶ್ರಾಂತ ನಿರ್ದೇಶಕ ಸಿದ್ಧರಾಮ ಮನಹಳ್ಳಿ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ ಪುಸ್ತಕ ಅನಾವರಣಗೊಳಿಸಲಿದ್ದಾರೆ. ಜಿ.ಪಂ.ಮಾಜಿ ಸದಸ್ಯ ಕೆ.ಮಹೇಶ, ಬಾದಾಮಿಯ ಜಿ.ಪಂ. ಮಾಜಿ ಉಪಾಧ್ಯಕ್ಷ ಪಿ.ಆರ್.ಗೌಡರ, ಯುವ ಮುಖಂಡ ದೊಡ್ಡಬಸನಗೌಡ ಪಾಟೀಲ ಬಯ್ಯಾಪೂರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ..!!