ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್|
ಕೊಪ್ಪಳ : ರಾಜ್ಯದಲ್ಲಿಯೇ ಅತ್ಯಂತ ಶೈಕ್ಷಣಿಕವಾಗಿ ಹಿಂದುಳಿದಿರುವ 7 ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಇಂದು ಸಿಎಂ ಮಂಡಿಸಿದ ಬಜೆಟ್ ನಲ್ಲಿ ಪ್ರಸ್ತಾಪವಾಗಿತು..!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಚೊಚ್ಚಲ ಬಜೆಟ್ ನಲ್ಲಿ ರಾಜ್ಯದಲ್ಲಿಯೇ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಕೊಪ್ಪಳ ಜಿಲ್ಲೆ ಸೇರಿದಂತೆ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾಪಿಸಲಾಗಿತು. ಬಹಳ ದಿನಗಳ ಬೇಡಿಕೆಗೆ ಸಿಎಂ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದು ಜಿಲ್ಲೆಯ ಜನರಿಗೆ ಸಂತಸ ತಂದಿದೆ.
ಅಂಜನಾದ್ರಿಗೆ 100 ಕೋಟಿ :
ರಾಮಾಯಣದ ಪ್ರಸಿದ್ಧಿ ಪಡೆದ ಹನುಮಂತನ ಜನ್ಮ ಸ್ಥಳವಾದ ಕಿಷ್ಕಿಂದಾ ಪ್ರದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ 100 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದರು. ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಿದ್ದನ್ನು ಕೋಟ್ಯಾಂತರ ಜನ ಹನುಮ ಭಕ್ತರು ರಾಜ್ಯ ಸರಕಾರವನ್ನು ಅಭಿನಂದಿಸಿದ್ದಾರೆ..!!