ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪರೀಕ್ಷಾ ಕೇಂದ್ರ ಭಾಗ್ಯ ಒಲಿದು ಬಂದಿದೆ..!
ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಕಡೆಗೂ ಮಣಿದು, ಬೆಳೆಯುತ್ತಿರುವ ತಾವರಗೇರಾ ಪಟ್ಟಣದ ಪ್ರಥಮ ದರ್ಜೆ ಕಾಲೇಜಿಗೆ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒಪ್ಪಿಗೆ ಸೂಚಿಸಿ, ಈಗಾಗಲೇ ಆದೇಶ ಕೂಡಾ ನೀಡಿದೆ.
581 ಕ್ಕೂ ಅಧಿಕ ದಾಖಲಾತಿ ಹೊಂದಿರುವ ಕಾಲೇಜಿನ ವಿದ್ಯಾರ್ಥಿಗಳು ದೂರದ ಕುಷ್ಟಗಿ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಇಲ್ಲಿಯವರೆಗೂ ಪರೀಕ್ಷೆ ಎದುರಿಸಬೇಕಾಗಿತ್ತು. ಪಾಲಕರು ಸೇರಿದಂತೆ ವಿದ್ಯಾರ್ಥಿಗಳು ಬಹಳ ದಿನಗಳ ಬೇಡಿಕೆ ಈಗ ಈಡೇರಿದಂತಾಗಿದೆ. ಅಲ್ಲದೆ, ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಕೂಡಾ ವಿವಿಗೆ ಪತ್ರ ಬರೆಯುವ ಮೂಲಕ ಒತ್ತಾಯಿಸಿದ್ದರು.
‘ಕೃಷಿ ಪ್ರಿಯ’ ಬಿಗ್ ಇಂಪ್ಯಾಕ್ಟ್ : ತಾವರಗೇರಾ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಆರಂಭಿಸುವಂತೆ ‘ಕೃಷಿ ಪ್ರಿಯ’ ಪತ್ರಿಕೆ ದಿನಾಂಕ 11-03-2022 ರಂದು “ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒತ್ತಾಯ” ಎಂಬ ತಲೆ ಬರಹದ ಮೂಲಕ ವಿಶೇಷ ವರದಿ ಬೆಳಕು ಚೆಲ್ಲಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ..!!

