ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಪಟ್ಟಲಚಿಂತಿ ಗ್ರಾಮದಲ್ಲಿ 16-04-2022 ರಂದು ಜರಗುವ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ನೂತನವಾಗಿ ನಿರ್ಮಿಸಿದ ಮಹಾ ರಥೋತ್ಸವಕ್ಕೆ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಚಾಲನೆ ನೀಡುವ ಮೂಲಕ ಲೋಕಾರ್ಪಣೆಗೊಳಿಸಲಿದ್ದಾರೆ..!
ರಥದ ಲೋಕಾರ್ಪಣೆ ದಿನದಂದು ಬ್ರಾಹ್ಮೀ ಮುಹೂರ್ತದಲ್ಲಿ ಅಂಜನಿ ಪುತ್ರನಿಗೆ ತೊಟ್ಟಿಲು ಸೇವೆ ಸೇರಿದಂತೆ ಹೋಮ ಹವನ ಕಾರ್ಯಕ್ರಮಗಳು ಜರುಗಲಿವೆ. ಕುದರಿಮೊತಿಯ ಶ್ರೀ ವಿಜಯಮಹಾಂತ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೆ, ಮಹಾಪ್ರಸಾದ ಸೇವೆ ಜರುಗಲಿದೆ. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು, ಮಾಲಗಿತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ರಾಜೂರು ಹಾಗೂ ಪಟ್ಟಲಚಿಂತಿ ಗ್ರಾಮಸ್ಥರ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವಿಸಿ, ಸತ್ಕರಿಸಲಾಗುವುದು ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ..!!