ಬೆಂಬಲ ಬೆಲೆ ಭತ್ತ ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ಕಾರಟಗಿಯಲ್ಲಿ ಪ್ರತಿಭಟನೆ

 

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘಟನೆ ಪದಾಧಿಕಾರಿಗಳು ಹಾಗೂ ರೈತರು ಕಾರಟಗಿ ಪಟ್ಟಣದ ಕನಕದಾಸ ವೃತ್ತದಲ್ಲಿ ಭತ್ತ ಸುರಿದು ಪ್ರತಿಭಟನೆ ನಡೆಸಿದ ಘಟನೆ ಜರುಗಿತು..!

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈಗಾಗಲೇ ಭತ್ತದ ಕಟಾವು ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಸರಕಾರ ಬೆಂಬಲ ಬೆಲೆ ನೀಡುವ ಮೂಲಕ ಖರೀದಿ ಕೆಂದ್ರ ಆರಂಭಿಸಬೇಕೆಂದು ರೈತರು ಒತ್ತಾಯಿಸಿದರು. ಭತ್ತ ಆವಕವಾಗುವ ಸಮಯದಲ್ಲಿ ಭತ್ತ ಖರೀದಿ ಆರಂಭಿಸಬೇಕು. ಅಲ್ಲದೆ, ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವ ಮೂಲಕ ಖರೀದಿ ಕೇಂದ್ರ ಆರಂಭಿಸಬೇಕೆಂದು ಆಗ್ರಹಿಸಿದರು. ಅತಿವೃಷ್ಠಿ , ಅನಾವೃಷ್ಠಿ ಹಾಗೂ ಬೆಲೆ ಇಳಿಕೆಯಿಂದ ತತ್ತರಿಸಿಹೊಗಿರುವ ರೈತರ ನೆರವಿಗೆ ಸರಕಾರಗಳು ಮುಂದೆ ಬರಬೇಕೆಂಬ ಬೇಡಿಕೆ ಮಂಡಿಸಿದ ಪ್ರಸಂಗ ಜರುಗಿತು.

ಸಂಘದ ರಾಜ್ಯ ಅಧ್ಯಕ್ಷ ಶರಣಪ್ಪ ದೊಡ್ಡಮನಿ, ಉಪಾಧ್ಯಕ್ಷ ಅಂಬರೀಶ ಜಾಗಬಾವಿ, ಬಸನಗೌಡ ಪೊಲೀಸ್ ಪಾಟೀಲ್ ಹಾಗೂ ಮೈಬೂಬಖಾನ್ ಸೇರಿದಂತೆ ನೂರಾರು ಜನ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು..!