ಡಾ.ಸಿದ್ಧಲಿಂಗಯ್ಯ ಶಂಕಿನಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

 

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಸರ್ಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಹಿರಿಯ ಪಶುವೈದ್ಯಾಧಿಕಾರಿ ಡಾ.ಸಿದ್ಧಲಿಂಗಯ್ಯ ಶಂಕಿನ್ ಅವರಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಿನಾಂಕ 25 – 04- 2022 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಸಿದ್ಧಲಿಂಗಯ್ಯ ಸೇರಿದಂತೆ ಜಿಲ್ಲೆಯ ಹತ್ತುಜನ ನೌಕರರಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಜಿಯಾ ತರುನ್ನುಮ್, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ ಸೇರಿದಂತೆ ಜಿಲ್ಲೆಯ ನೌಕರರ ಸಂಘದವರು ಹಾಜರಿದ್ದರು.

ಹರ್ಷ : ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ಕುಷ್ಟಗಿಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ಸಿದ್ಧಲಿಂಗಯ್ಯ ಶಂಕಿನ್ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನಜೀರಸಾಬ ಮೂಲಿಮನಿ, ಮಹಾಂತಮ್ಮ ಪಾಟೀಲ್, ಶರಣಯ್ಯ ಮಳ್ಳೂರುಮಠ ಸೇರಿದಂತೆ ಪಶು ಪಾಲನಾ ಇಲಾಖೆ ಸಿಬ್ಬಂದಿ ವರ್ಗ ಸನ್ಮಾನಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.