ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕೊಪ್ಪಳ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯು ಇಂದು ಸಹ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ..!
ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಮತ್ತು ರಾಜ್ಯದ ಹಲವೆಡೆ ಏಕಕಾಲದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ 20-05-2022 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಷೋಷಿಸಿ, ಎಂದಿನಂತೆ ಶಾಲಾ-ಕಾಲೇಜುಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ..!!