ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛತೆ ಅರಿವಿನ ಅಗತ್ಯತೆ ಇದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ ಅಭಿಪ್ರಾಯವ್ಯಕ್ತಪಡಿಸಿದರು.
ಅವರು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮ ಪಂಚಾಯಿತಿಯವರು ಸ್ಥಳೀಯ ಸರಕಾರಿ ಬಾಲಕಿಯರ ಪ್ರೌಢ ಶಾಲಾ ಆವರಣದಲ್ಲಿ ರೋಹನ್ ಕೇರ್ ಫೌಂಡೇಶನ್ ಹಮ್ಮಿಕೊಂಡಿದ್ದ ಹೈಟೆಕ್ ಶೌಚಾಲಯ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರ ಸ್ವಚ್ಛ ಭಾರತ ಮಿಷನ್ ಮೂಲಕ ಕೋಟ್ಯಂತರ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸದುಪಯೋಗಪಡಿಸಿಕೊಳ್ಳುವ ಅಗತ್ಯತೆ ಇದೆ ಎಂದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಕ್ರವ್ವ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು, ಪಿಡಿಓ ನಿಂಗಪ್ಪ ಮೂಲಿಮನಿ, ಶಾಲೆಯ ಮುಖ್ಯಗುರು ಆರ್.ಹೆಚ್.ಉಕ್ಕಲಿ, ದೈಹಿಕ ಶಿಕ್ಷಣ ಶಿಕ್ಷಕ ಕಂಬಾರ, ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಶಾಲಾ ಸಿಬ್ಬಂದಿ ವರ್ಗ ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.