ತಂಬಾಕು ಸೇವನೆ ಜೀವಕ್ಕೆ ಮಾರಕ : ನ್ಯಾಯಮೂರ್ತಿ ಸರಸ್ವತಿದೇವಿ

 

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : ತಂಬಾಕು ಸೇವನೆಯಿಂದ ಪ್ರತಿ ವರ್ಷ 8 ಮಿಲಿಯನ್ ಜನ ಜೀವನ ಕಳೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ
ತಂಬಾಕು ಬಿತ್ತನೆಯಿಂದ ಪರಿಸರವೂ ಹಾಳಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸರಸ್ವತಿ ದೇವಿ ಅಭಿಪ್ರಾಯವ್ಯಕ್ತಪಡಿಸಿದರು..!

ವಿಶ್ವ ತಂಬಾಕು ನಿಷೇಧ ದಿನಾಚರಣೆ ಅಂಗವಾಗಿ ಜಿಲ್ಲೆಯ ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 31-05-2022 ರಂದು ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಿಷ್ಟು, ತಂಬಾಕು ಬೆಳೆಯ ಇಳುವರಿಗಾಗಿ ಕ್ರಿಮಿನಾಶಕ ಬಳಕೆಯಿಂದ ನೇರವಾಗಿ ಮನುಷ್ಯನ ಅನಾರೋಗ್ಯಕ್ಕೆ ಕಾರಣವಾಗಿದೆ. ಹಾಗಾಗಿ ಯುವ ಸಮೂಹ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಂಬಾಕು ಸೇವನೆಯಿಂದ ಹರಡುವ ದುಷ್ಪರಿಣಾಮಗಳ ಕುರಿತು ಆಡಳಿತಾಧಿಕಾರಿ ಡಾ.ಕೆ.ಎಸ್.ರಡ್ಡಿ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ.ಎಸ್.ವಿ.ಡಾಣಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಶಂಭುಲಿಂಗಯ್ಯ ಮೂಡಿಮಠ, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ ಈಳಿಗೇರ, ಸಹಾಯಕ ಅಭಿಯೋಜಕ ರಾಯನಗೌಡ ಎಲ್ ಸೇರಿದಂತೆ ಕಾಲೇಜ್ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ಉಪನ್ಯಾಸಕ ಮಹಾಂತೇಶ ನಿರೂಪಿಸಿದರು..!!