ಚಳಗೇರಾ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಮಹದೇವಪ್ಪ ಹಡಪದ ಆಯ್ಕೆ

 

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಹಾಂತೇಶ್ ಮಹದೇವಪ್ಪ ಹಡಪದ
ಹಾಗೂ ಉಪಾಧ್ಯಕ್ಷರಾಗಿ ಶಾಂತವ್ವ ಜಾಲಿ ಆಯ್ಕೆಯಾಗಿದ್ದಾರೆ.

ದಿನಾಂಕ 01-06-2022 ರಂದು ನಡೆದ ಚುನಾವಣೆಯಲ್ಲಿ 24 ಜನ ಸದಸ್ಯರ ಬಲದ ಪಂಚಾಯಿತಿಯ ಸಾಮಾನ್ಯ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾರುತೆಪ್ಪ ಯಮನಪ್ಪ ಗಡದ ನಾಮಪತ್ರ ಸಲ್ಲಿಸಿದ್ದರು. 2ಎ ಮಹಿಳೆ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಶಾಂತವ್ವ ಲಕ್ಷ್ಮಣ ಜಾಲಿ ಹಾಗೂ ಕಾಂಗ್ರೆಸ್ ಬೆಂಬಲಿತ ನಿಂಬವ್ವ ದೇವೇಂದ್ರಪ್ಪ ಕತ್ತಿ ಎಂಬುವರು ನಾಮಪತ್ರ ಸಲ್ಲಿಸಿದ್ದರು.
ತಹಸೀಲ್ದಾರ್ ಎಂ.ಸಿದ್ದೇಶ್ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಹಾಂತೇಶ ಹಡಪದ 13 ಮತ ಪಡೆದು ಆಯ್ಕೆಯಾದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಮಾರುತೆಪ್ಪ ಗಡದ 10 ಮತ ಪಡೆದು ಸೋಲುಂಡಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತವ್ವ ಜಾಲಿ 13 ಮತ ಪಡೆದು ಆಯ್ಕೆಯಾದರೆ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ನಿಂಬವ್ವ ಕತ್ತಿ 10 ಮತ ಪಡೆದು ಸೋಲು ಅನುಭವಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಸಂಕನಾಳ ಹಾಗೂ ಸಿಬ್ಬಂದಿ ಹಾಜರಿದ್ದರು..!!