ಸಸಿ ನೆಟ್ಟು ಪರಿಸರ ದಿನಾಚರಣೆ

 

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : ಪ್ರತಿಯೊಬ್ಬರೂ ಸಸಿಗಳನ್ನು ನೆಡುವ ಮೂಲಕ ಹಸಿರು ಸಮೃದ್ಧಿಗೆ ಮುಂದಾಗಬೇಕೆಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ ಹಡಪದ ಹೇಳಿದರು..!

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ನೀರುಣಿಸುವ ಮೂಲಕ ಅವರು, ಗ್ರಾಮಸ್ಥರಲ್ಲಿ ಪರಿಸರ ಜಾಗೃತಿ ಮೂಡಿಸಿದರು.

ಗ್ರಾಪಂ ಉಪಾಧ್ಯಕ್ಷೆ ಶಾಂತವ್ವ ಜಾಲಿ, ಸದಸ್ಯರಾದ ನಾಗರಾಜ ಹಿರೇಮಠ, ಉಮಾದೇವಿ ನಾಯಕ್, ಮಾಜಿ ಉಪಾಧ್ಯಕ್ಷೆ ಪದ್ಮಾವತಿ ಪಿ, ಮುಖಂಡರಾದ ಶರಣಪ್ಪ ಶಟ್ಟರ್, ಶರಣಪ್ಪ ಕೋಟಿಮ್ಯಾಗಿನ, ಶರಣಪ್ಪ ಬಚ್ಚನವರ, ಪರಿಮಳಾ ಶೆಟ್ಟರ್, ಗ್ರಾಮ ಪಂಚಾಯಿತಿ ಪಿಡಿಓ ಬಸವರಾಜ ಸಂಕನಾಳ, ಪ್ರೌಢ ಶಾಲೆ ಮುಖ್ಯಶಿಕ್ಷಕ ರಾಯಪ್ಪ ಹೂಗಾರ್, ಆರೋಗ್ಯ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.