ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಹೋಬಳಿ ಘಟಕದ ಕಾಂಗ್ರೆಸ್ ಪಕ್ಷದ ಸೋಶಿಯಲ್ ಮೀಡಿಯಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಸೋಶಿಯಲ್ ಮೀಡಿಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವೀರಣ್ಣ ಬಡಿಗೇರ ಅವರನ್ನ ಹನುಮನಾಳ ಹೋಬಳಿ ಮಟ್ಟದ ಕಾಂಗ್ರೆಸ್ ಪಕ್ಷದ ಸೋಶಿಯಲ್ ಮೀಡಿಯಾ ಅಧ್ಯಕ್ಷರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ಘೋಷಿಸಿದರು. ಘಟಕದ ಉಪಾಧ್ಯಕ್ಷರಾಗಿ ನಾಗರಾಜ ಭಜಂತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಶರಣಪ್ಪ ಹಾಳಕೇರಿ, ಕಾರ್ಯದರ್ಶಿಗಳಾಗಿ ಮಹಾಂತೇಶ ನಾಗಲಾಪೂರು, ವಿಠ್ಠಲ ಗೊಂದಳೆ, ಮಲ್ಲಿಕಾರ್ಜುನ ಶಾಡಲಗೇರಿ, ಹನುಮಂತ ತಳವಾರ, ಕಿರಣ ಬ್ಯಾಳಿ, ಯಮನೂರ ತಳವಾರ, ಅಣ್ಣಯ್ಯ ಬೇನಾಳ, ಸುನೀಲ ಕಮ್ಮಾರ, ಹನುಮಂತ ಪೊಲೇಶಿ ಆಯ್ಕೆಮಾಡಿ ಘೋಷಿಸಲಾಗಿತು. ಆಯ್ಕೆ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ಹಸನಸಾಬ್ ದೋಟಿಹಾಳ, ಜಿಪಂ ಮಾಜಿ ಅಧ್ಯಕ್ಷೆ ಮಾಲತಿ ನಾಯಕ, ಹನುಮಸಾಗರ-ಹನುಮನಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ ತಳವಾರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. ಹನುಮನಾಳ ಹೋಬಳಿ ಕಾಂಗ್ರೆಸ್ ಮುಖಂಡರು ಪದಾಧಿಕಾರಿಗಳಿಗೆ ಅಭಿನಂದಿಸಿದರು..!