ಹಿರೇಮನ್ನಾಪೂರದಲ್ಲಿ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ

 

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರು ಗ್ರಾಮದ ಡಾ ಪುನೀತ್ ರಾಜಕುಮಾರ ಅಭಿಮಾನಿ ಬಳಗ ಹಾಗೂ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸ್ತಕ ಸಾಲಿನ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 21 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ದಿನಾಂಕ 18-06-2022 ರಂದು ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯೋಪಾಧ್ಯಾಯ ಎಸ್.ಜಿ.ಕಡೇಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!