ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕಟ್ಟಕಡೆಯ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿರುವ ತುಗ್ಗಲಡೋಣಿ ಗ್ರಾಮದ ಕಡೆಗೆ ಜಿಲ್ಲಾಧಿಕಾರಿ ಸುರಳ್ಕರ ವಿಕಾಸ ಕಿಶೋರ್ ಅವರು ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ..!
‘ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ’ ಎಂಬ ವಿನೂತನ ಕಾರ್ಯಕ್ರಮದ ನಿಮಿತ್ಯ ಜಿಲ್ಲಾಧಿಕಾರಿಗಳು ತುಗ್ಗಲಡೋಣಿ ಗ್ರಾಮಕ್ಕೆ ಭೇಟಿ ನೀಡುವ ಕಾರ್ಯಕ್ರಮ ಇಂದು (ದಿನಾಂಕ 18-06-2022) ನಿಗದಿಯಾಗಿದೆ. ಜಿಲ್ಲಾಧಿಕಾರಿಗಳ ಭೇಟಿ ನೀಡುವ ಹಿನ್ನಲೆಯಲ್ಲಿ ತುಗ್ಗಲಡೋಣಿ ಗ್ರಾಮ ಪಂಚಾಯಿತಿ ಸೇರಿದಂತೆ ಕುಷ್ಟಗಿಯಿಂದ ತುಗ್ಗಲಡೋಣಿ ಗ್ರಾಮದವರೆಗೆ ರಸ್ತೆ ಮಧ್ಯದಲ್ಲಿ ಬರುವ ಬಹುತೇಕ ಪಂಚಾಯಿತಿ ಅಧಿಕಾರಿಗಳು ಎಚ್ಚತ್ತುಕೊಂಡಂತೆ ಕಾಣುತ್ತಿದೆ. ಪ್ರಮುಖ ರಸ್ತೆಗಳ ಬದಿ ಹಾಕಲಾಗಿದ್ದ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಸ್ವಚ್ಛತಾ ಕಾರ್ಯ ನಡೆದಿರುವುದು ಅಲ್ಲಲ್ಲಿ ಕಂಡು ಬಂದಿತು.
ಅಧ್ಯಕ್ಷರಿಂದ ಸ್ವಾಗತ : ತುಗ್ಗಲಡೋಣಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡುತ್ತಿರುವುದು ಬಹಳಷ್ಟು ಸಂತೋಷ ತಂದಿದೆ. ಜಿಲ್ಲಾಧಿಕಾರಿಗಳು ಭೇಟಿ ನೀಡುವುದರಿಂದ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರ ಬೇಡಿಕೆಗಳು ಈಡೇರಿದಂತಾಗುತ್ತವೆ. ಭೇಟಿ ನೀಡುವ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರು ಅವರಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಜ ಬೆಣ್ಣಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ..!!