ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ರಾಜ್ಯ ಹಾಗೂ ಕೇಂದ್ರ ಸರಕಾರದ ಸೌಲಭ್ಯಗಳು ಜನರಿಗೆ ತಲುಪುವಂತಾಗಬೇಕಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅಭಿಪ್ರಾಯವ್ಯಕ್ತಪಡಿಸಿದರು.
ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಹಳೆ ಬಸ್ ನಿಲ್ದಾಣ ಬಳಿಯಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಕ್ರಮ್ಮ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು, ಪಿಡಿಓ ನಿಂಗಪ್ಪ ಮೂಲಿಮನಿ, ಸದಸ್ಯರಾದ ಶಿವು ಕಂಪ್ಲಿ ಮುಖಂಡರಾದ ಸಂಗಯ್ಯ ವಸ್ತ್ರದ ಸೇರಿದಂತೆ ಮುಖಂಡರು, ಸಾಮಾಜಿಕ ಜಾಲತಾಣದ ಪದಾಧಿಕಾರಿಗಳು, ಶಾಲಾ ಮುಖ್ಯಗುರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

