ಗವಿಮಠಕ್ಕೆ 10 ಕೋಟಿ ಅನುದಾನ ನೀಡಿದ ಬೊಮ್ಮಾಯಿ ಸರಕಾರ

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ನಗರದ ಶ್ರೀ ಗವಿಮಠದ 5 ಸಾವಿರ ವಿದ್ಯಾರ್ಥಿಗಳ ವಸತಿ ಹಾಗೂ ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಕೋಟಿ ರೂಪಾಯಿಗಳ ಅನುದಾನ ನೀಡಿರುವುದು ವಿಶೇಷ..!

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಅಧ್ಯಕ್ಷರು ಸೇರಿದಂತೆ ಈ ಭಾಗದ ಚುನಾಯಿತ ಪ್ರತಿನಿಧಿಗಳು, ಮುಖಂಡರು ಶ್ರೀ ಗವಿಮಠದ ಪ್ರಸಾದ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ 25 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಸಲ್ಲಿಸಿದ ಮನವಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಅನಿಲಕುಮಾರ ಅವರು 10 ಕೋಟಿ ರೂಪಾಯಿಗಳ ಅನುದಾನ ಘೋಷಿಸಿ ಇಂದು ಆದೇಶ ಹೊರಡಿಸಿದ್ದಾರೆ..!!