ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ಪಟ್ಟಣದ ಶಾಖಾಪೂರು ರಸ್ತೆಯ 7ನೇ ವಾರ್ಡ್ ಚೂರಿ ಲೇಔಟಿನಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ದಿನಾಂಕ 08-07-2022 ರಂದು ಜರುಗಲಿದೆ.!
ಕುಂಭ ದೊಂದಿಗೆ ಶ್ರೀ ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಗುವುದು. ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಅರ್ಚಕರು, ಮೂರ್ತಿ ಪ್ರತಿಷ್ಠಾಪನೆ ಮಾಡುವರು ಬಳಿಕ ಹೋಮ ಹವನಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಕಲ ವಾದ್ಯಗಳೊಂದಿಗೆ ಕುಂಭ ಕಳಸ ಮೇರವಣಿಗೆ ಜರುಗಲಿದೆ. ಬಳಿಕ ಮಹಾ ಪ್ರಸಾದ ಜರುಗಲಿದೆ. ಮಹಿಳೆಯರು ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ ಈ ಶುಭ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ದೇವಸ್ಥಾನದ ಉಸ್ತುವಾರಿ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ..!!