ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪಾ ಗ್ರಾಮದಲ್ಲಿ ದಿನಾಂಕ 07-07-2022 ರಂದು ಸುಮಾರು ಹದಿನೈದು ಜನ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ..!
ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ನವಲಹಳ್ಳಿ ಅವರು, ತಮ್ಮ ಪಕ್ಷದ ಸಿದ್ಧಾಂತ ಮೆಚ್ಚಿ ಬಂದ ಯುವ ಮುಖಂಡರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಸ್ವಾಗತಿಸಿಕೊಂಡರು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಂ.ಹಿರೇಮಠ, ಮುಖಂಡರಾದ ತುಕಾರಾಮ್ ಸುರ್ವೇ, ಶಶಿಧರ ಕುಂಬಾರ, ಶಿವಶಂಕರಪ್ಪ ಕುರಿ, ವೀರೇಶ ನಿಡಗುಂದಿಮಠ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು..!!