ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ..!
ದಿನಾಂಕ 01-07-2020 ರಂದು ಆಗಿನ ಜಿಲ್ಲಾಧಿಕಾರಿಯಾಗಿದ್ದ ಪಿ.ಸುನೀಲಕುಮಾರ ಅವರಿಂದ ಅಧಿಕಾರ ಸ್ವೀಕರಿಸಿದ್ದರು. 2 ವರ್ಷ 10 ದಿನಗಳ ಕಾಲ ಸುರಳ್ಕರ್ ವಿಕಾಸ್ ಕಿಶೋರ್ ಅವರು ಜಿಲ್ಲೆಯಲ್ಲಿ ಆಡಳಿತ ನಡೆಸಿದ್ದರು. ಕೊರೋನಾ ವೈರಸ್ ಮೊದಲನೇ ಅಲೆಯ ಆರ್ಭಟದಲ್ಲಿ ಜಿಲ್ಲಾಧಿಕಾರಿಯಾಗಿ ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದ್ದನ್ನು ಜಿಲ್ಲೆಯ ಜನರು ಸ್ಮರಿಸಿಕೊಂಡಿರುವುದು ವಿಶೇಷ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆಗೊಳಿಸಿ 11-07-2022 ರಂದು ಸರಕಾರ ಹೊರಡಿಸಿದ ಆದೇಶ ಪತ್ರದಲ್ಲಿ ಸ್ಪಷ್ಟಪಡಿಸಿದೆ..!!