ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಗಂಗಾವತಿ ನಗರದ ಎಸ್.ಕೆ.ಎನ್.ಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದ ಸಹಯೋಗದಲ್ಲಿ ದಿನಾಂಕ 12-07-2022 ಬೆಳಿಗ್ಗೆ 11 ಗಂಟೆಗೆ ದಿವಂಗತ ವೈ.ಕೆ.ರಾಮಯ್ಯ ದತ್ತಿ ನಿಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ..!
ಹಂಪಿ ಕನ್ನಡ ವಿವಿ ಕುಲಪತಿ ಡಾ.ಸ ಚಿ ರಮೇಶ ಅಧ್ಯಕ್ಷತೆವಹಿಸುವರು. ಹೊಸಪೇಟೆಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಶಿವಾನಂದ ಕನ್ನಡ ಕಾವ್ಯ ವ್ಯಾಖ್ಯಾನ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವವರು. ಪ್ರಾಚಾರ್ಯ ಡಾ.ಎನ್.ಜಿ.ಹೆಬಸೂರು, ಕಾಲೇಜ್ ಆಡಳಿತ ಸಮಿತಿ ಕಾರ್ಯಧ್ಯಕ್ಷ ಶಿವಾನಂದ ಮೇಟಿ, ಭಾಷಾಂತರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎ.ಮೋಹನ ಕುಂಟಾರ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಜಗದೇವಿ ಕಲಶೆಟ್ಟಿ , ಭಾಷಾಂತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ವಿಠ್ಠಲರಾವ್ ಟಿ ಗಾಯಕವಾಡ್, ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ.ಜಾಜಿ ದೇವೇಂದ್ರಪ್ಪ ಹಾಗೂ ಹಂಪಿ ಕನ್ನಡ ವಿವಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಸೇರಿದಂತೆ ಇನ್ನಿತರ ಕನ್ನಡ ಪಂಡಿತರ ದಂಡೆ ದತ್ತಿ ನಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ..!!