ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕೊಪ್ಪಳ ಜಿಲ್ಲಾಧಿಕಾರಿಯಾಗಿ 2012 ನೇ ಐಎಎಸ್ ಬ್ಯಾಚ್ ನ ಸುಂದರೇಶ ಬಾಬು ಎಂ, ಎಂಬುವರನ್ನು ರಾಜ್ಯ ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ..!
ಇಲ್ಲಿಯವರೆಗೂ ಆಡಳಿತದಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ ಕಿಶೋರ್ ಅವರನ್ನು ಸರಕಾರ ಕೆ.ಪಿ.ಎಸ್.ಸಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆಗೊಳಿಸಿತ್ತು. ತೆರವಾಗಿದ್ದ ಸ್ಥಾನಕ್ಕೆ ಪಕ್ಕದ ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಹೆಸರುವಾಸಿಯಾಗಿರುವ ಸುಂದರೇಶ ಬಾಬು ಅವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದ್ದು ಜಿಲ್ಲೆಯ ಜನರಿಗೆ ಸಂತೋಷವನ್ನುಂಟುಮಾಡಿದೆ..!!