ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಜ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿಯ ಮಾಜಿ ಶಾಸಕರಾದ ಹಸನಸಾಬ ದೋಟಿಹಾಳ ಹಾಗೂ ದೊಡ್ಡನಗೌಡ ಹೆಚ್ ಪಾಟೀಲ್ ಜೆಡಿಎಸ್ ಪಕ್ಷಕ್ಕೆ ಕರೆತರಲು ಮಾತುಕತೆ ಚಾಲ್ತಿಯಲ್ಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸುಳಿವು ನೀಡಿದರು..!
ಜಿಲ್ಲೆಯ ಕುಷ್ಟಗಿ ಪಟ್ಟಣದ ಜೆಡಿಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಎಂ.ಹಿರೇಮಠ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿ, ಸುದ್ದಿಗಾರರ ಪ್ರಶ್ನೆಗೆ ಸ್ಪಷ್ಟಪಡಿಸಿದರು. ಮಾಜಿ ಶಾಸಕರು ಜೆಡಿಎಸ್ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಯುತ್ತಿರುವುದು ಅಲ್ಲಗಳೆಯುವಂತಿಲ್ಲ. ಪಕ್ಷ ಸೇರ್ಪಡೆ ಕುರಿತು ಮಾತುಕತೆ ಚಾಲ್ತಿಯಲ್ಲಿದೆ. ದೂರದಿಂದ ಇಲ್ಲಿಗೆ ಬಂದಿರುವುದಕ್ಕೆ ಏನಾದರೂ ಇರುತ್ತದೆ ಅಲ್ಲವೇ..!? ಎಂದು ಮರು ಪ್ರಾಶ್ನಿಸುವ ಮೂಲಕ ಸುಳಿವು ನೀಡಿದ್ದು ಮತ್ತಷ್ಟು ಪುಷ್ಟಿ ನೀಡಿದಂತಾಗಿತು.
ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವಿದೆ. ಈ ಭಾಗದಲ್ಲಿ ನಿಯೋಜಿತ ಅಭ್ಯರ್ಥಿಗಳು ಇದ್ದಾರೆ ಹೊರತು, ಇಂಥವರೇ ಪಕ್ಷದ ಅಭ್ಯರ್ಥಿ ಎಂದು ಟಿಕೇಟ್ ಇನ್ನೂ ನೀಡಿಲ್ಲ. ಟಿಕೇಟಗಾಗಿ ಬೇಡಿಕೆ ಹೆಚ್ಚುತ್ತಿದೆ ಎಂದರು.
ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಸಿಎಂ.ಹಿರೇಮಠ, ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ (ವಕೀಲರು) ನವಲಹಳ್ಳಿ ಹಾಗೂ ಕುಷ್ಟಗಿ, ಕನಕಗಿರಿ, ಯಲಬುರ್ಗಾ ಕ್ಷೇತ್ರದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..!!