ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಅಗತ್ಯ : ಕೆ.ಶರಣಪ್ಪ

 

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಭಾಗದ ಸ್ವಾತಂತ್ರ್ಯ ಸೇನಾನಿಗಳ ಕೊಡುಗೆ ಅಪಾರವಾದದ್ದು ಎಂದು ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಅಭಿಪ್ರಾಯವ್ಯಕ್ತಪಡಿಸಿದರು..!

ಅವರು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ಸೇನಾನಿ ರಾಚಪ್ಪ ಸೂಡಿ ಹಾಗೂ ಈರಮ್ಮ ಸೂಡಿ ಶೈಕ್ಷಣಿಕ ಮತ್ತು ಸಾಮಾಜಿಕ ಟ್ರಸ್ಟ್ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಲ್ಲಿಸಿ ಮಾತನಾಡಿದರು. ತಂದೆ ತಾಯಿ ಮರೆತು ಬದುಕುವ ಇಂದಿನ ದಿನಮಾನಗಳಲ್ಲಿ ನಿವೃತ್ತ ಉಪನ್ಯಾಸಕ ಎಸ್.ಆರ್.ಸೂಡಿ ಸಹೋದರರು ಅವರ ತಂದೆ ತಾಯಿಯವರ ಹೆಸರಿನ ಟ್ರಸ್ಟ್ ಮೂಲಕ ಸಾಮಾಜಿಕ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಟ್ರಸ್ಟ್ ಅಧ್ಯಕ್ಷ ಹಾಗೂ ನಿವೃತ್ತ ಉಪನ್ಯಾಸಕ ಎಸ್.ಆರ್.ಸೂಡಿ, ಕಾರ್ಯದರ್ಶಿ ಹಾಗೂ ಬೆಂಗಳೂರಿನ ಎಸ್.ಎಸ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಸುರೇಶ ಸೂಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ಲೆಂಕಪ್ಪ ಸಾಂತಗೇರಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಸಿದ್ದು ರೊಟ್ಟಿ, ಗ್ರಾಪಂ ಉಪಾಧ್ಯಕ್ಷೆ ಭೀಮವ್ವ ಮಲ್ಲಪ್ಪ ತುಂಬದ, ತಾಪಂ ಮಾಜಿ ಸದಸ್ಯ ಅಂದಪ್ಪ ತಳವಾರ, ಮುಖಂಡರಾದ ವೀರಣ್ಣ ಗಜೇಂದ್ರಗಡ, ದ್ಯಾವನಗೌಡ ಗೌಡ್ರ, ಮಲ್ಲಪ್ಪ ತುಂಬದ, ಯಮನೂರಪ್ಪ ಭಜಂತ್ರಿ, ಸಂತೋಷ ಸಿದ್ರಾಮಪ್ಪ ಸೂಡಿ, ಮಲ್ಲಮ್ಮ ವೀರಣ್ಣ ಸೂಡಿ ಸೇರಿದಂತೆ ಮುಖ್ಯಗುರುಗಳು, ಸಿಬ್ಬಂದಿ ವರ್ಗ ಮತ್ತು ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಲೋಗಲ್, ಮಾಲಗಿತ್ತಿ, ಜಾಗೀರಗುಡದೂರ, ಹಿರೇಗೊಣ್ಣಾಗರ, ತುಗ್ಗಲಡೋಣಿ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಸತ್ಕರಿಸಿ, ಪುರಸ್ಕಾರ ನೀಡಿದ್ದು ವಿಶೇಷವಾಗಿತ್ತು..!!