ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಕುಷ್ಟಗಿ ತಾಲೂಕು ಘಟಕದ ವತಿಯಿಂದ ದಿನಾಂಕ 27-07-2022 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.!
ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಕಾರ್ಯಕ್ರಮ ಉದ್ಘಾಟಿಸುವರು. ವಿಜಯ ಕರ್ನಾಟಕ ದಿನಪತ್ರಿಕೆ ಹುಬ್ಬಳ್ಳಿ ಆವೃತ್ತಿ ಸ್ಥಾನಿಕ ಸಂಪಾದಕ ಡಾ.ಬಂಡು ಕುಲಕರ್ಣಿ ವಿಶೇಷ ಉಪನ್ಯಾಸ ನೀಡುವರು. ಸಂಘದ ತಾಲೂಕಾಧ್ಯಕ್ಷ ಅನಿಲ್ ಆಲಮೇಲ ಅಧ್ಯಕ್ಷತೆವಹಿಸುವರು. ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಗುಡ್ಲಾನೂರು, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಭಾಗವಹಿಸುವರು.
ಹಿರಿಯ ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಪುರಸ್ಕರಿಸಿ ಗೌರವಿಸಲಾಗುವುದು ಎಂದು ತಾಲೂಕಾ ಪ್ರಧಾನ ಕಾರ್ಯದರ್ಶಿ ಬಸವರಾಜ ಪಲ್ಲೇದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!!