ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಪ್ರೌಢ ಶಾಲೆಗಳ ಕುಷ್ಟಗಿ ಪೂರ್ವ ವಲಯ ಮಟ್ಟದ ಕ್ರೀಡಾಕೂಟವು ಹಿರೇಮನ್ನಾಪೂರ ಗ್ರಾಮದ ಶ್ರೀ ಗವಿಸಿದ್ಧೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಜುಲೈ 29 ಮತ್ತು 30 ರಂದು ಏರ್ಪಡಿಸಲಾಗಿದೆ..!
ದಿನಾಂಕ 29-07-2022 ರಂದು ಬೆಳಿಗ್ಗೆ 9-30 ಕ್ಕೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಸೇರಿದಂತೆ ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಧರ್ಮಕುಮಾರ ಕಂಬಳಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಮಲ್ಲಿಕಾರ್ಜುನ ಲಕ್ಕಲಕಟ್ಟಿ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಶಾಲೆಯ ಮುಖ್ಯಗುರು ಎಸ್.ಜಿ.ಕಡೆಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!!