ಕುಷ್ಟಗಿಯಲ್ಲಿ ಅಪರಿಚಿತ ವ್ಯಕ್ತಿ ನೇಣಿಗೆ ಶರಣು

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ (ಕುಷ್ಟಗಿ) : ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿವೊಬ್ಬ ನೇಣಿಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ..!

ಕುಷ್ಟಗಿ ಪಟ್ಟಣದ ಅಡಿವಿರಾಯ ಕಾಲೋನಿಯ ನೊಬೆಲ್ ಕಾನ್ವೆಂಟ್ ಶಾಲೆ ಹಿಂಭಾಗದಲ್ಲಿ ನಿರ್ಮಾಣದ ಹಂತದಲ್ಲಿರುವ ಮನೆಯೊಂದರಲ್ಲಿ ಘಟನೆ ಜರುಗಿದೆ. ನೇಣಿಗೆ ಶರಣಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.
ವ್ಯಕ್ತಿಯ ಶವ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತನ ಗುರುತಿಗಾಗಿ ಪೊಲೀಸರು ಸಾರ್ವಜನಿಕರಲ್ಲಿ ಮನವಿಮಾಡಿಕೊಂಡಿದ್ದಾರೆ..!!