ಬ್ಯಾಲಿಹಾಳದಲ್ಲಿ ರಾಷ್ಟ್ರಧ್ವಜ ಕಾರ್ಯಾಗಾರ


 


ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಆಚರಣೆಗೆ ಮುಂದಾಗಿರುವ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ರಾಷ್ಟ್ರ ಧ್ವಜಾರೋಹಣದ ಸಮಗ್ರ ನೀತಿ ನಿಯಮಗಳನ್ನು ಅನುಸರಿಸಲು ಕುಷ್ಟಗಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯಗುರುಗಳು ಮತ್ತು ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ಬ್ಯಾಲಿಹಾಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ..!

ದಿನಾಂಕ 06-08-2022 ಶನಿವಾರರಂದು 9 ಗಂಟೆಗೆ ಬ್ಯಾಲಿಹಾಳ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆರಂಭಗೊಳ್ಳಲಿರುವ ಕಾರ್ಯಾಗಾರದಲ್ಲಿ ತಾಲೂಕಿನ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಗುರುಗಳು ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಭಾಗವಹಿಸಿ, ರಾಷ್ಟ್ರ ಧ್ವಜಾರೋಹಣ ಸೇರಿದಂತೆ ಅವರೋಹಣದಲ್ಲಿ ಪಾಲಿಸಬೇಕಾದ ನಿಯಮ, ನೀತಿ ಸೇರಿದಂತೆ ಅದರ ಪಾವಿತ್ರ್ಯತೆಯ ಕುರಿತು ಕಾರ್ಯಾಗಾರದಲ್ಲಿ ನುರಿತ ತರಬೇತಿದಾರರಿಂದ ತರಬೇತಿ ಪಡೆಯುವಂತೆ ಬಿಇಓ ಸುರೇಂದ್ರ ಕಾಂಬಳೆ ಅವರು ಆದೇಶ ಹೊರಡಿಸಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಹಾಗೂ ಬ್ಯಾಲಿಹಾಳ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ಲಕ್ಕಲಕಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ..!!