ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯು ಸಸ್ಯಸಂತೆ ಹಾಗೂ ತೋಟಗಾರಿಕೆ ಅಭಿಯಾನವನ್ನು 15-08-2022 ರಿಂದ 19-08-2022 ರವರೆಗೆ ಹಮ್ಮಿಕೊಳ್ಳಲಾಗಿದೆ..!
ತೋಟಗಾರಿಕೆ ಜಿಲ್ಲಾ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಅಲಂಕಾರಿಕ ಹೂ, ಹಣ್ಣು, ತರಕಾರಿ, ಔಷಧಿ ಮತ್ತು ಸುಗಂಧದ್ರವ್ಯ ಸಸಿಗಳ ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣಾ ಉಕ್ಕುಂದ ತಿಳಿಸಿದ್ದಾರೆ..!!