ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಮೊದಲನೇ ದಿನ 13-08-2022 ರಂದು ರಾಷ್ಟ್ರ ಧ್ವಜಾರೋಹಣವನ್ನು ಸಂಭ್ರಮದಿಂದ ನೆರವೇರಿಸಲಾಯಿತು..!
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಸಂಕನಾಳ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಮಹಾಂತೇಶ ಮಹದೇವಪ್ಪ ಹಡಪದ, ಉಪಾಧ್ಯಕ್ಷೆ ಶಾಂತವ್ವ ಲಕ್ಷ್ಮಣ ಜರ್ಲಿ ಮತ್ತು ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಸೇರಿ ಇತರರು ಉಪಸ್ಥಿತರಿದ್ದರು.
ಶುಕ್ರವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಳಗೇರಿ, ಕಲಾಲಬಂಡಿ, ಜೂಲಕಟ್ಟಿ ಹಾಗೂ ಜುಂಜಲಕೊಪ್ಪ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಯಿಂದ ಸುಮಾರು 2,000 ತ್ರಿವರ್ಣ ಧ್ವಜಗಳನ್ನು ಉಚಿತವಾಗಿ ವಿತರಿಸಲಾಗಿತು. ಶನಿವಾರ ಗ್ರಾಮಗಳಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮೇಲೆ ಗೌರವಯುತವಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ರಾಷ್ಟ್ರ ಪ್ರೇಮ ಮೆರೆದರು..!!