ಹುಲಿಹೈದರ ಘಟನೆ ವಿಡಿಯೋ ವೈರಲ್..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಇತ್ತೀಚಿಗೆ ಜರುಗಿದ ಘಟನೆಯ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಸಾಕಷ್ಟು ವೈರಲ್ ಆಗಿದೆ..!

ಘಟನೆ ಜರುಗಿದ ಸಮಯದಲ್ಲಿ ಹುಲಿಹೈದರ ಗ್ರಾಮದ ಪ್ರಮುಖ ಮುಖ್ಯ ರಸ್ತೆಯಲ್ಲಿ ಜನಸಮೂಹ ಘಟನಾ ಸ್ಥಳಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಗೌಪ್ಯವಾಗಿ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಘಟನೆಯಲ್ಲಿ ಹುಲಿಹೈದರ ಗ್ರಾಮದ ಬೇರೆ ಬೇರೆ ಸಮುದಾಯಕ್ಕೆ ಸೇರಿದ ಇಬ್ಬರು ಮೃತಪಟ್ಟಿದ್ದರು. ಓರ್ವನು ತೀವ್ರವಾಗಿ ಗಾಯಗೊಂಡಿದ್ದರ ಬಗ್ಗೆ ವರದಿಯಾಗಿತ್ತು..!!