ಕಲ್ಯಾಣಿ ಸ್ವಚ್ಛತೆ ಕಾರ್ಯ ಆರಂಭ

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮ ಪಂಚಾಯತಿ ಕಲ್ಯಾಣಿ ಸ್ವಚ್ಚತಾ ಕಾರ್ಯಕ್ಕೆ ಮುಂದಾಗಿದೆ..!

ಕುಷ್ಟಗಿ ಯಿಂದ ಹನುಮನಾಳ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಐತಿಹಾಸಿಕ ಕಲ್ಯಾಣಿಯನ್ನು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸ್ವಚ್ಚಗೊಳಿಸುವ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕ್ರಮ್ಮ ನಿರ್ವಾನಿ ಉಪಾಧ್ಯಕ್ಷ ಮಂಜುನಾಥ ಹುಲ್ಲೂರು ಸೇರಿದಂತೆ ಪಿಡಿಓ ನಿಂಗಪ್ಪ ಮೂಲಿಮನಿ ಸೇರಿದಂತೆ ಸದಸ್ಯರು ಮುಖಂಡರು ಭಾಗವಹಿಸಿದ್ದರು..!!