ದುಷ್ಕರ್ಮಿಗಳಿಂದ ಶಾಲೆಯ ಸಿಸಿ ಕ್ಯಾಮರಾ ಹಾಳು

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಸ್ಮಾರ್ಟ ಕ್ಲಾಸ್ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ಯಾರೋ ದುಷ್ಕರ್ಮಿಗಳು ಹಾಳು ಮಾಡಿರುವ ಘಟನೆ ಜರುಗಿದೆ..!

ಸರಕಾರಿ ಕಚೇರಿ ಸೇರಿದಂತೆ ಶಾಲಾ ಕಾಲೇಜುಗಳಲ್ಲಿ ದುಷ್ಕರ್ಮಿಗಳ ಕಣ್ಗಾವಲಿಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನೇ ದುಷ್ಕರ್ಮಿಗಳು ಹಾಳು ಮಾಡಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರಕರಣ ಕುರಿತು ಹನುಮಸಾಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಸಿ.ಆರ್.ಪಿ ಶರಣಗೌಡ ಗೌಡ್ರ ಪತ್ರಿಕೆಗೆ ತಿಳಿಸಿದ್ದಾರೆ. ಆದರೆ, ಘಟನೆ ಜರುಗಿದ ದಿನ ಸಿಸಿ ಕ್ಯಾಮರಾಗಳು ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸುತ್ತಿರಲಿಲ್ಲ.

ಇತ್ತೀಚೆಗೆ ಇದೆ ಕೌಂಪಾಂಡ್ ವ್ಯಾಪ್ತಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿನ ಧ್ವನಿ ವರ್ಧಕಗಳನ್ನು ಕಳ್ಳತನವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಘಟನೆಗೆ ಕಾರಣರಾದವನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಶಾಲೆಯ ಮುಖ್ಯಗುರು ಹನುಮಂತಪ್ಪ ಮಾಲಗಿತ್ತಿ ಸೇರಿದಂತೆ ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ..!!