ಖಾಸಗಿ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕರ ದಿನಾಚರಣೆ

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಕುಷ್ಟಗಿ ತಾಲೂಕಾ ಖಾಸಗಿ ಶಾಲೆಗಳ ಶಿಕ್ಷಕರ ಹಾಗೂ ಶಿಕ್ಷಕರೇತರ ಸಂಘದ ವತಿಯಿಂದ ದಿನಾಂಕ 24-09-2022 ರಂದು ಬೆಳಿಗ್ಗೆ 10 ಗಂಟೆಗೆ ಕುಷ್ಟಗಿ ಪಟ್ಟಣದ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದ ಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ..!

ಅಂದು ಉತ್ತಮ ಶಿಕ್ಷಕರಿಗೆ ಸನ್ಮಾನದ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಲ್ಲಿಸಲಾಗುವುದು. ಅಲ್ಲದೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸೇವೆ ಸಲ್ಲಿಸಿ, ಮುದೇನೂರು ಸರಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿರುವ ಪ್ರಥಮ ದರ್ಜೆ ಸಹಾಯಕ ರಾಜು ಬಾಳಿತೋಟ ಅವರ ಬಿಳ್ಕೋಡಿಗೆ ಕಾರ್ಯಕ್ರಮ ಜರಗುವುದು.

ಕಲ್ಯಾಣ ಕರ್ನಾಟಕ ಕುಷ್ಟಗಿ ತಾಲೂಕಾ ಅನುದಾನ ರಹಿತ ಶಾಲಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಶಿವನಗೌಡ ಎಸ್ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಚಳಗೇರಿ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕುಷ್ಟಗಿ ಮದ್ದಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು, ನಿಡಶೇಸಿಯ ಶ್ರೀ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕುಷ್ಟಗಿ ವಿಜಯ ವಿಠ್ಠಲ ವಿದ್ಯಾಮಂದಿರದ ಸಂತ ಮಹಾರಾಜ ಹನುಮಂತಪ್ಪ ಯಾಳವಾರ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಕುಷ್ಟಗಿ ಶಾಸಕರು ಹಾಗೂ ಮಾಜಿ ಸಚಿವರು ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ಕಾರ್ಯಕ್ರಮ ಉದ್ಘಾಟಿಸುವರು. ಅಲ್ಲದೆ, ಮಾಜಿ ಶಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಶಿಕ್ಷಕರ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!!