ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ಪಟ್ಟಣದ ಶ್ರೀ ಬುತ್ತಿಬಸವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಕುಷ್ಟಗಿ ತಾಲೂಕಾ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು..!
ಶಾಸಕ ಹಾಗೂ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಕ ಸ್ಥಾನ ಜವಬ್ದಾರಿಯುತವಾದದ್ದು ಅರಿತು ನಡೆಯಬೇಕಾಗಿದೆ. ಪೈಪೋಟಿಯಲ್ಲಿ ಮಕ್ಕಳ ಕಲಿಕಾ ಪ್ರಗತಿ ಕೂಡಾ ಅಷ್ಟೇ ಮುಖ್ಯವಾಗಬೇಕಾಗಿದೆ. ಈ ಭಾಗದಲ್ಲಿ ಶಿಕ್ಷಕರ ನೇಮಕಾತಿ ಕೊರತೆ ಎದ್ದು ಕಾಣುತ್ತಿದೆ. ಈ ಕುರಿತು ಸರಕಾರದ ಜೊತೆಗೆ ಸಾಕಷ್ಟು ಚರ್ಚಿಸಲಾಗಿದೆ ಎಂದು ಬಯ್ಯಾಪೂರು ಅಭಿಪ್ರಾಯವ್ಯಕ್ತಪಡಿಸಿದರು. ಒಕ್ಕೂಟದ ಜಿಲ್ಲಾ ಗೌರವ ಅಧ್ಯಕ್ಷ ಹಾಗೂ ಹಿರಿಯ ವಕೀಲ ರಾಘವೇಂದ್ರ ಪಾನಘಂಟಿ ವಿಶೇಷ ಉಪನ್ಯಾಸ ನೀಡಿದರು.
ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರು ಮತ್ತು ವಿಜಯಚಂದ್ರಶೇಖರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿಜೆಪಿ ರಾಷ್ಟ್ರೀಯ ಪರಿಷತ್ತು ಸದಸ್ಯ
ಸಿ.ವಿ.ಚಂದ್ರಶೇಖರ್ ಅವರು ಉತ್ತಮ ಶಿಕ್ಷಕರಾಗಿ ಆಯ್ಕೆಯಾದ ಶಿಕ್ಷಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.
ರಾಜು ಬಾಳಿತೋಟ ಅವರಿಗೆ ಗೌರವ ಸನ್ಮಾನ : ಕುಷ್ಟಗಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಲವು ವರ್ಷಗಳಿಂದ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ಮುದೇನೂರು ಸರಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿರುವ ರಾಜು ಬಾಳಿತೋಟ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಗಿತು.
ಚಳಗೇರಾ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕುಷ್ಟಗಿಯ ಮದ್ಧಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ವಿಜಯ ವಿಠ್ಠಲ ವಿದ್ಯಾಮಂದಿರ ಸಂತಮಹಾರಾಜ ಹನುಮಂತಪ್ಪ ಯಾಳವಾರ ದಿವ್ಯಸಾನ್ನಿಧ್ಯ ವಹಿಸಿದ್ದರು.
ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕಾಧ್ಯಕ್ಷ ಶಿವುನಗೌಡ ಎಸ್ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಮಾಜಿ ಶಾಸಕರಾದ ಕೆ.ಶರಣಪ್ಪ, ದೊಡ್ಡನಗೌಡ ಎಚ್.ಪಾಟೀಲ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಶ ಪತ್ತಾರ, ವಿಜಯಚಂದ್ರಶೇಖರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಬಿಜೆಪಿ ರಾಷ್ಟ್ರೀಯ ಪರಿಷತ್ತು ಸದಸ್ಯ ಸಿ.ವಿ.ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಸೇರಿದಂತೆ ಒಕ್ಕೂಟದ ಸದಸ್ಯರು, ಇನ್ನಿತರರು ಭಾಗವಹಿಸಿದ್ದರು..!!